ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮತ್ತೊಂದೆಡೆ ಡೆಂಗ್ಯೂಯಿಂದ ಜನರು ಸಾವನ್ನಪ್ಪಿರುವುದು ಕೂಡ ಆತಂಕವನ್ನುಂಟು ಮಾಡುತ್ತಿದೆ. ಡೆಂಗ್ಯೂಗೆ ಬಲಿಯಾದವರ ಬಗ್ಗೆ ಮಾಹಿತಿ ನೀಡಲು ಖಾಸಗಿ ಆಸ್ಪತ್ರೆಯವರಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಕೇಸ್ ಗಳು ಹೆಚ್ಚಳವಾಗುತ್ತಿದ್ದು,೫೩೭೪ ಹೆಚ್ಚು ಕೇಸ್ ದಾಖಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದೂವರೆ ಸಾವಿರ ಸನಿಹಕ್ಕೆ ತಲುಪಿದೆ . ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಗೆ ಇದುವರೆಗೂ ಏಳು ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಬಗ್ಗೆ ಡೆತ್ ಆಡಿಟ್ ಮಾಡುವುದಕ್ಕೆ ಇಲಾಖೆ ಮುಂದಾಗಿದೆ.
ಖಾಸಗಿ ಆಸ್ಪತ್ರೆಯವರು ಕೂಡ ಡೆಂಗ್ಯೂ ಡೆತ್ ಗಳು ಹಾಗೂ ಪ್ರಕರಣಗಳನ್ನ ನೋಟಿಫೈ ಮಾಡಬೇಕು. ಯಾವುದೇ ಖಾಸಗಿ ಆಸ್ಪತ್ರೆಗೆ ಬರುವ ಡೆಂಗ್ಯೂ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಜೊತೆಗೆ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು ಹಾಗೂ ಡೆತ್ ಮಾಹಿತಿಯನ್ನು ಹಂಚಿಕೊಳ್ಳಲು ಸಚಿವರು ಸೂಚಿಸಿದ್ದು, ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಯವರು ಡೆಂಗ್ಯೂ ಮಾಹಿತಿಯನ್ನು ಮುಚ್ಚಿಡಬಾರದು.
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…