Mysore
19
scattered clouds
Light
Dark

ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರು : ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈಗಾಗಲೇ ಸೋಂಕು ಹರಡುವಿಕೆ ತಡೆಯಲು ಬಿಬಿಎಂಪಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿದ್ದರು ಕೂಡ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ದುಪ್ಪಟ್ಟು ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಮಳೆಗಾಲ ಆರಂಭವಾಗಿರುವ ಕಾರಣ ಬೆಂಗಳೂರು ಮಾತ್ರವಲ್ಲ, ರಾಜ್ಯದ ಬೇರೆ ಕಡೆಗಳಲ್ಲೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.  ಈಗಾಗಲೇ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನು ಸಹ ಕೈಗೊಂಡಿದೆ. ಆದರೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ.

2022ರಲ್ಲಿ ಇಡೀ ವರ್ಷಕ್ಕೆ 2335 ಡೆಂಗ್ಯೂ ಕೇಸ್‌ ಗಳು ಪತ್ತೆಯಾಗಿದ್ದವು. ಆದರೆ, 2023ರಲ್ಲಿ 11,136 ಡಂಗ್ಯೂ ಕೇಸ್‌ಗಳು ಪತ್ತೆಯಾಗಿದ್ದವು. ಈ ವರ್ಷ ಜನವರಿಯಿಂದ ಜೂನ್‌ ತಿಂಗಳವರೆಗೆ 1530 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.