ಬೆಂಗಳೂರು : ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈಗಾಗಲೇ ಸೋಂಕು ಹರಡುವಿಕೆ ತಡೆಯಲು ಬಿಬಿಎಂಪಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿದ್ದರು ಕೂಡ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ದುಪ್ಪಟ್ಟು ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಮಳೆಗಾಲ ಆರಂಭವಾಗಿರುವ ಕಾರಣ ಬೆಂಗಳೂರು ಮಾತ್ರವಲ್ಲ, ರಾಜ್ಯದ ಬೇರೆ ಕಡೆಗಳಲ್ಲೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಈಗಾಗಲೇ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನು ಸಹ ಕೈಗೊಂಡಿದೆ. ಆದರೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ.
2022ರಲ್ಲಿ ಇಡೀ ವರ್ಷಕ್ಕೆ 2335 ಡೆಂಗ್ಯೂ ಕೇಸ್ ಗಳು ಪತ್ತೆಯಾಗಿದ್ದವು. ಆದರೆ, 2023ರಲ್ಲಿ 11,136 ಡಂಗ್ಯೂ ಕೇಸ್‌ಗಳು ಪತ್ತೆಯಾಗಿದ್ದವು. ಈ ವರ್ಷ ಜನವರಿಯಿಂದ ಜೂನ್ ತಿಂಗಳವರೆಗೆ 1530 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…