Mysore
23
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ಡೆಂಗ್ಯೂ ಹೆಚ್ಚಳ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್‌

ಬೆಂಗಳೂರು: ರಾಜಧಾನಿ ಬೆಂಗಳೂರು, ಮೈಸೂರು ಸೇರಿಂದಂತೆ ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ‌ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್‌(ಸಾರ್ವಜನಿಕ ಹಿತಾಸಕ್ತಿ ಅರ್ಜಿ) ದಾಖಲಿಸಿಕೊಂಡಿದೆ.

ಇಂದು(ಜು.10) ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್‌ ಅವರಿದ್ದ ನ್ಯಾಯಪೀಠ ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಬಗ್ಗೆ ಕಳವಳ ವ್ಯಕ್ತಪಡಿಸಿತು. ಅಲ್ಲದೇ ಡೆಂಗ್ಯೂ ಹೆಚ್ಚಳ ಸಂಬಂಧ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರುಸ್ಥಿತಿ ಘೋಷಣೆ ಮಾಡಬೇಕಾದ ಅಗತ್ಯವಿದೆ ಎಂದು ವ್ಯಕ್ತಿಯೊಬ್ಬರು ಬರೆದಿದ್ದ ಸಂಪಾದಕೀಯ ಅಂಕಣದ ವರದಿನ್ನು ಪ್ರಸ್ತಾಪಿಸಿತು. ಜೊತೆಗೆ ಇನ್ನೀತರ ದಿನಪತ್ರಿಜೆಗಳ ವರದಿಯನ್ನೂ ಉಲ್ಲೇಖಿಸಿ ಅರ್ಜಿ ದಾಖಲಿಸಿಕೊಂಡಿದೆ.

ಈ ಬಗ್ಗೆ ಸರ್ಕಾರಕ್ಕೆ ತುರ್ತು ನೋಟಿಸ್‌ ಜಾರಿ ಮಾಡಿದೆ. ಜುಲೈ 23 ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸರ್ಕಾರನಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

 

Tags:
error: Content is protected !!