ಬೆಂಗಳೂರು: ರಾಜಧಾನಿ ಬೆಂಗಳೂರು, ಮೈಸೂರು ಸೇರಿಂದಂತೆ ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್(ಸಾರ್ವಜನಿಕ ಹಿತಾಸಕ್ತಿ ಅರ್ಜಿ) ದಾಖಲಿಸಿಕೊಂಡಿದೆ.
ಇಂದು(ಜು.10) ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದ ನ್ಯಾಯಪೀಠ ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಬಗ್ಗೆ ಕಳವಳ ವ್ಯಕ್ತಪಡಿಸಿತು. ಅಲ್ಲದೇ ಡೆಂಗ್ಯೂ ಹೆಚ್ಚಳ ಸಂಬಂಧ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರುಸ್ಥಿತಿ ಘೋಷಣೆ ಮಾಡಬೇಕಾದ ಅಗತ್ಯವಿದೆ ಎಂದು ವ್ಯಕ್ತಿಯೊಬ್ಬರು ಬರೆದಿದ್ದ ಸಂಪಾದಕೀಯ ಅಂಕಣದ ವರದಿನ್ನು ಪ್ರಸ್ತಾಪಿಸಿತು. ಜೊತೆಗೆ ಇನ್ನೀತರ ದಿನಪತ್ರಿಜೆಗಳ ವರದಿಯನ್ನೂ ಉಲ್ಲೇಖಿಸಿ ಅರ್ಜಿ ದಾಖಲಿಸಿಕೊಂಡಿದೆ.
ಈ ಬಗ್ಗೆ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ. ಜುಲೈ 23 ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸರ್ಕಾರನಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…