ಬೆಂಗಳೂರು : ದಿವಗಂತ ನಟ ಪುನೀತ್ ರಾಜ್‌ಕುಮಾರ್ ಅವರ 50ನೇ ಜನ್ಮದಿನದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ʻಅಪ್ಪುʼ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ.
ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪ್ಪು ಸ್ಮರಣಾರ್ಥ ವಿಶೇಷ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದೆ. ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಸೋಮವಾರ ಈ ಪಿಚ್ಚರ್ ಪೋಸ್ಟ್ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದ್ದಾರೆ.
ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅಪ್ಪು ಗಂಧದ ಗುಡಿ ಅಗರಬತ್ತಿ ಸಹಯೋಗದೊಂದಿಗೆ ಪೋಸ್ಟ್ ಕಾರ್ಡ್‌ಗಳನ್ನು ಹೊರತರಲಾಗುತ್ತಿದೆ. ಆಸಕ್ತರು ಕರ್ನಾಟಕ ಅಂಚೆಚೀಟಿ ಸಂಗ್ರಹಣಾ ಬ್ಯೂರೋಗಳಿಂದ ಈ ಚಿತ್ರಗಳನ್ನು ಪಡೆದುಕೊಳ್ಳಬಹುದು. ಅವರ ಜನ್ಮದಿನವಾದ ಮಾರ್ಚ್ 17 ರಂದು ವಿಶೇಷ ರಿಯಾಯಿತಿಯನ್ನು ಸಹ ಪಡೆಯಬಹುದು ಎಂದು ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕಮಾರ್ ತಿಳಿಸಿದ್ದಾರೆ.





