ರಾಜ್ಯ

ಅಪ್ಪು ಸ್ಮರಣಾರ್ಥ ʻಪಿಕ್ಚರ್‌ ಪೋಸ್ಟ್‌ ಕಾರ್ಡ್‌ʼ ಬಿಡುಗಡೆ ಅಂಚೆ ಇಲಾಖೆ

ಬೆಂಗಳೂರು : ದಿವಗಂತ ನಟ ಪುನೀತ್‌ ರಾಜ್‌ಕುಮಾರ್‌ ಅವರ 50ನೇ ಜನ್ಮದಿನದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ʻಅಪ್ಪುʼ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ.

ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪ್ಪು ಸ್ಮರಣಾರ್ಥ ವಿಶೇಷ ಪೋಸ್ಟ್‌ ಕಾರ್ಡ್‌ ಬಿಡುಗಡೆ ಮಾಡಿದೆ. ಪುನೀತ್‌ ರಾಜ್‌ಕುಮಾರ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಸೋಮವಾರ ಈ ಪಿಚ್ಚರ್‌ ಪೋಸ್ಟ್‌ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಅಪ್ಪು ಗಂಧದ ಗುಡಿ ಅಗರಬತ್ತಿ ಸಹಯೋಗದೊಂದಿಗೆ ಪೋಸ್ಟ್‌ ಕಾರ್ಡ್‌ಗಳನ್ನು ಹೊರತರಲಾಗುತ್ತಿದೆ. ಆಸಕ್ತರು ಕರ್ನಾಟಕ ಅಂಚೆಚೀಟಿ ಸಂಗ್ರಹಣಾ ಬ್ಯೂರೋಗಳಿಂದ ಈ ಚಿತ್ರಗಳನ್ನು ಪಡೆದುಕೊಳ್ಳಬಹುದು. ಅವರ ಜನ್ಮದಿನವಾದ ಮಾರ್ಚ್‌ 17 ರಂದು ವಿಶೇಷ ರಿಯಾಯಿತಿಯನ್ನು ಸಹ ಪಡೆಯಬಹುದು ಎಂದು ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್‌ ಎಸ್.ರಾಜೇಂದ್ರ ಕಮಾರ್‌ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

8 mins ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

20 mins ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

2 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

2 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

2 hours ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

3 hours ago