ಬೆಂಗಳೂರು : ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರ್ಕಾರ ಪ್ರತಿಯೊಂದು ರಾಜ್ಯ ಸರ್ಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
ಪೊಲೀಸರಿಗೆ ರಜೆ ಇಲ್ಲ;
ಪೊಲೀಸರಿಗೆ ರಜೆ ಕೊಡುವುದಿಲ್ಲ. ಸೂಕ್ಷ್ಮ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ. ಸದ್ಯಕ್ಕೆ ಯಾವುದೇ ರಜೆ ಇಲ್ಲ. ಪರಿಸ್ಥಿತಿ ಸಾಮಾನ್ಯಕ್ಕೆ ಬಂದಿರುವುದನ್ನು ಕೇಂದ್ರ ಸರ್ಕಾರ ನಮಗೆ ತಿಳಿಸುತ್ತದೆ. ಅಲ್ಲಿಯವರೆಗೂ ನಾವು ಸೂಕ್ಷ್ಮವಾಗಿರಬೇಕು ಎಂದರು.
ಕರಾವಳಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗುತ್ತದೆ. ಕರಾವಳಿಯಲ್ಲಿ ಬಿಗಿ ಭದ್ರತೆ ವಹಿಸಿದ್ದೇವೆ. ಮಂಗಳೂರು, ಉತ್ತರ ಕನ್ನಡದಲ್ಲಿ ನಿಗಾ ವಹಿಸಲಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ವಹಿಸಿದೆ. ನೇವಿ ಅವರು ಕೂಡ ಭದ್ರತೆ ವಹಿಸಿದ್ದಾರೆ. ನಮ್ಮ ಬಾರ್ಡರ್ ಒಳಗೆ ಸೆಕ್ಯೂರಿಟಿ ಇದೆ. ಆ ಮಾಹಿತಿ ನಮಗೆ ಬಂದಿಲ್ಲ. ಕೇಂದ್ರದವರು ಏನಾದರೂ ಇದ್ದರೆ ಹೇಳುತ್ತಾರೆ ಎಂದರು.
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…