ರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಿಗೂ ಕೂಡ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

1 hour ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

1 hour ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

1 hour ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

1 hour ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

1 hour ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

2 hours ago