ಚಿಕ್ಕಮಗಳೂರು : ವಿಧಾನಸಭೆ ನೂತನ ಸ್ಪೀಕರ್ ಯು ಟಿ ಖಾದರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು ದಾಖಲಿಸಿದ್ದಾರೆ.
ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಹಿನ್ನಲೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ. ಈ ಕೂಡಲೇ ಈತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ‘ಸದನದಲ್ಲಿ ಸಭಾಧ್ಯಕ್ಷರೇ ಅನ್ನಬೇಕಾ ಅಥವಾ ಸಾಬಾಧ್ಯಕ್ಷರೇ ಅನ್ನಬೇಕಾ? ಎಂಬಂತಹ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ. ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರು ಶ್ರೀರಾಮಸೇನೆ ಮುಖಂಡ ಪ್ರೀತೇಶ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.