Mysore
28
few clouds

Social Media

ಮಂಗಳವಾರ, 27 ಜನವರಿ 2026
Light
Dark

ಸಿಎಸ್‌ ವಿರುದ್ಧ ಅವಹೇಳನಕಾರಿ ಮಾತು : ಬಿಜೆಪಿಯ ರವಿಕುಮಾರ್‌ ವಿರುದ್ಧ ಎಫ್‌ಐಆರ್‌ 

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್ ವಿರುದ್ಧ ಆಕ್ಷೇಪರ್ಹ ಪದ ಬಳಸಿದ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ .ರವಿಕುಮಾರ್ ಮೇಲೆ ಎಪ್ ಐ ಆರ್ ದಾಖಲಾಗಿದ್ದು ಬಂಧನದ ಭೀತಿ ಎದುರಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಮನೋಹರ್ ಅವರ ದೂರಿನ ಮೇರೆಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಎಪ್ ಐ ಆರ್ ದಾಖಲು ಮಾಡಿಕೊಳ್ಳಲಾಗಿದೆ.‌

ಇದೀಗ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ರವಿಕುಮಾರ್ ಅವರನ್ನು ವಶಕ್ಕೆ ಇಲ್ಲವೇ ಬಂಧಿಸಲುಬಹುದು. ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರು ಅಸಂಸದೀಯ ಪದ ಬಳಸಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತ್ತು. ರವಿಕುಮಾರ್ ಅವರನ್ನು ಅಮಾನತು ಮಾಡುವಂತೆ ಮತ್ತು ವಿಧಾನ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಕಾಂಗ್ರೆಸ್‌ನಿಂದ ದೂರು ದಾಖಲಾಗಿತ್ತು.

ಈ ಸಂಬಂಧ ವಿಧಾನ ಪರಿಷತ್ ಸಭಾಪತಿಗೆ ಕಾಂಗ್ರೆಸ್ ದೂರು ಸಲ್ಲಿಸಿತ್ತು. ಎನ್. ರವಿಕುಮಾರ್ ಅವರನ್ನು ಅಮಾನತು ಮಾಡುವಂತೆ ಕಾಂಗ್ರೆಸ್ ಆಗ್ರಹಿಸಿದೆ. ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಪಡಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ಮನೋಹರ್ ಸಭಾಪತಿಗೆ ದೂರು ನೀಡಿದ್ದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ವಿಧಾನಸೌಧ ಭದ್ರತೆಯ ಉಪ ಪೊಲೀಸ್ ಆಯುಕ್ತ ಎಂ ಎನ್ ಕರಿಬಸವನಗೌಡ ಅವರೊಂದಿಗೆ ಚರ್ಚೆ ನಡೆಸುತ್ತಿರುವಾಗ ರವಿಕುಮಾರ್ ಈ ಹೇಳಿಕೆ ನೀಡಿದ್ದರು.‌

ಸಿಎಂ ವಿರುದ್ಧ ಬಿಜೆಪಿ ಎಮ್‌ಎಲ್‌ಸಿ ಎನ್. ರವಿಕುಮಾರ್ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡನೀಯವಾಗಿದೆ. ಹೆಣ್ಣುಮಕ್ಕಳ ಬಗ್ಗೆ ಅವರ ಭಾಷ್ಯ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಮತ್ತೆ ಮತ್ತೆ ಬಿಜೆಪಿಯವರಿಂದಲೇ ಇಂತಹ ಸಂದರ್ಭಗಳು ನಡೆಯುತ್ತಿವೆ ಎಂಬುದನ್ನು ಅವರು ಸಾಬೀತುಪಡಿಸುತ್ತಿದ್ದಾರೆ.

ರವಿಕುಮಾರ್ ಅವರನ್ನು ಮುಖ್ಯ ಸಚೇತಕ ಸ್ಥಾನದಿಂದ ತೆಗೆದುಹಾಕಬೇಕು. ಸಿಎಸ್ ಶಾಲಿನಿ ರಜನೀಶ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಂತಹ ಯಶಸ್ವಿ ಮಹಿಳಾ ಅಧಿಕಾರಿಯ ಕುರಿತು ಆಕ್ಷೇಪಾರ್ಹವಾಗಿ ಮಾತನಾಡುವುದು ಖಂಡನೀಯ. ಕಲಬುರಗಿ ಡಿಸಿ ವಿರುದ್ಧವೂ ಇಂತಹದೇ ರೀತಿಯಲ್ಲಿ ಅವರು ಮಾತನಾಡಿದ್ದರು.

Tags:
error: Content is protected !!