ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಇಲ್ಲ ಸಲ್ಲದ ಆರೋಪಗಳನ್ನು, ಹೇಳಕೆಗಳನ್ನು ನೀಡುತ್ತಿದ್ದಾರೆ. ಈ ರೀತಿಯ ಗೊಂದಲ ಸೃಷ್ಠಿಸುವ ಬದಲು ಈಗಾಗಲೇ ತನಿಖೆ ಆರಂಭಿಸಿರುವ ಪಿ.ಎನ್ ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಕಿಡಿಕಾರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮದ ಬಗ್ಗೆ ದೇಸಾಯಿ ಆಯೋಗ ತನಿಖೆ ಆರಂಭಿಸಿದೆ. ಮುಡಾ ಹಗರಣ ಬಗ್ಗೆ ಯಾವುದೇ ಮಾಹಿತಿ ಇದ್ದರೂ ವಿರೋಧ ಪಕ್ಷಗಳು ಈ ಆಯೋಗಕ್ಕೆ ಮಾಹಿತಿ ನೀಡಿ ತನಿಖಾ ಪ್ರಕ್ರಿಯೆಗೆ ಸಹಕರಿಸಲಿ. ಅದು ಬಿಟ್ಟು ಬಹಿರಂಗವಾಗಿ ಗೊಂದಲ ಉಂಟುಮಾಡುವ ಹೇಳಿಕೆಗಳನ್ನು ಕೊಡುವುದನ್ನು ಮೊದಲು ನಿಲ್ಲಿಸಲಿ ಎಂದು ಹೇಳಿದರು.
ರಾಜ್ಯಪಾಲರು ಭದ್ರತೆ ಕೇಳಿದ ಹಿನ್ನೆಲೆಯಲ್ಲಿ ಉನ್ನತ ಭದ್ರೆಯನ್ನು ಒದಗಿಸಲಾಗಿದೆ. ರಾಜ್ಯಪಾಲರಿಗೆ ಯಾವ ರೀತಿಯ ಬೆದರಿಕೆ ಬಂದಿದೆ ಎಂಬ ಬಗ್ಗೆ ನಮಗೆ ಮಾಹಿತಿಯಿಲ್ಲ. ಬಿಜೆಪಿಯವರ ಇತ್ತೀಚೆಗಿನ ಬೆಳವಣಿಗೆಯೇ ಇಂತಹ ಸನ್ನಿವೇಶಗಳಿಗೆ ಕಾರಣವಾಗಿದೆ ಎಂದರು.
ಇನ್ನು ಎಚ್‌ಡಿ ಕುಮಾರಸ್ವಾಮಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಷ್ಟೆ ಹೇಳಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…