ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್ ಆಗಿದ್ದು, ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ನಡೆಯುತ್ತದೆ.
ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಮೇ 7ರಂದು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಮೇ 4 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ರಾಜ್ಯದಲ್ಲಿ ಈ ಬಾರಿ ಒಟ್ಟು 5,42,08,088 ಕೋಟಿ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷರು 2,71,21,407 ಕೋಟಿ ಇದ್ದರೇ, ಮಹಿಳೆಯರು 2,70,81,748 ಕೋಟಿ ಇದ್ದಾರೆ. ತೃತೀಯ ಲಿಂಗಿಗಳ ಸಂಖ್ಯೆ 4,933 ಮತದಾರರು ಇದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ನೀತಿ ಸಂಹಿತೆ ಜಾರಿಯಾಗಿದೆ.
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಅರ್ಜಿ ಸಲ್ಲಿಕೆ ವಿವರ:
ನಾಮಪತ್ರ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್ 28
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 4
ನಾಮಪತ್ರ ಪರಿಶೀಲನೆ: ಏಪ್ರಿಲ್ 5
ನಾಮಪತ್ರ ವಾಪಾಸಾತಿ ಗಡುವು: ಏಪ್ರಿಲ್ 8 ವರೆಗೆ ಇರಲಿದೆ.
ಎರಡನೇ ಹಂತದ ಮತದಾನಕ್ಕೆ ಅರ್ಜಿ ಸಲ್ಲಿಕೆ ವಿವರ:
ನಾಮಪತ್ರ ಸಲ್ಲಿಕೆ ಆರಂಭ ದಿನಾಂಕ: ಏಪ್ರಿಲ್ 12
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 19
ನಾಮಪತ್ರ ಪರಿಶೀಲನೆ: ಏಪ್ರಿಲ್ 20
ನಾಮಪತ್ರ ವಾಪಾಸಾತಿ ಗಡುವು: ಏಪ್ರಿಲ್ 22 ವರೆಗೆ ಇರಲಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…