Mysore
17
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಕ್ಯಾನ್ಸರ್‌ಕಾರಕ ಅಂಶ ಪತ್ತೆ; ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ

ಬೆಂಗಳೂರು: ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಸುವುದು ಅಪಾಯವೆಂದು ಆಹಾಯ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ದೃಢಪಡಿಸಿದೆ. ಈ ಬೆನ್ನಲ್ಲೇ, ಇಲಾಖೆ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಿದೆ.

ಹಿಂದೆಲ್ಲಾ ಬಟ್ಟೆ ಉಪಯೋಗಿಸಿ ಇಡ್ಲಿ ತಯಾರಿಸುತ್ತಿದ್ದರು. ಆದರೆ, ಇದೀಗ ಪ್ಲಾಸ್ಟಿಕ್‌ ಹಾಳೆಗಳನ್ನು ಉಪಯೋಗಿಸುತ್ತಿದ್ದಾರೆ. ಇಲಾಖೆಯ ಅಧಿಕಾರಿಗಳು 251 ಸ್ಥಳಗಳಲ್ಲಿ ಪರಿಶೀಲಿಸಿದಾಗ, 52 ಕಡೆ ಪ್ಲಾಸ್ಟಿಕ್‌ ಹಾಳೆ ಬಳಸಿ ಇಡ್ಲಿ ಬೇಯಿಸಿರುವುದು ಪತ್ತೆಯಾಗಿದೆ. ಪ್ಲಾಸ್ಟಿಕ್‌ ಕ್ಯಾನ್ಸರ್‌ಕಾರಕ ಅಂಶಗಳನ್ನು ಹೊಂದಿದೆ. ಇದು ಇಡ್ಲಿಗೆ ಸೇರಿದರೆ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ ಎಂದು ಗುರುವಾರ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್‌ ಬಳಸಿದರೆ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್‌ ಅಂಶ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದು ಕ್ಯಾನ್ಸರ್‌ಗೆ ಕಾರಣವಾಗಲಿದೆ. ಯಾವುದೇ ಕಾರಣಕ್ಕೂ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್‌ ಬಳಕೆಗೆ ಅವಕಾಶವಿಲ್ಲ. ಬಳಸಿದರೆ ದಂಡ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್‌ ನಿಷೇಧಿಸಲಾಗಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

Tags:
error: Content is protected !!