ಬೆಂಗಳೂರು: ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುವುದು ಅಪಾಯವೆಂದು ಆಹಾಯ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ದೃಢಪಡಿಸಿದೆ. ಈ ಬೆನ್ನಲ್ಲೇ, ಇಲಾಖೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ.
ಹಿಂದೆಲ್ಲಾ ಬಟ್ಟೆ ಉಪಯೋಗಿಸಿ ಇಡ್ಲಿ ತಯಾರಿಸುತ್ತಿದ್ದರು. ಆದರೆ, ಇದೀಗ ಪ್ಲಾಸ್ಟಿಕ್ ಹಾಳೆಗಳನ್ನು ಉಪಯೋಗಿಸುತ್ತಿದ್ದಾರೆ. ಇಲಾಖೆಯ ಅಧಿಕಾರಿಗಳು 251 ಸ್ಥಳಗಳಲ್ಲಿ ಪರಿಶೀಲಿಸಿದಾಗ, 52 ಕಡೆ ಪ್ಲಾಸ್ಟಿಕ್ ಹಾಳೆ ಬಳಸಿ ಇಡ್ಲಿ ಬೇಯಿಸಿರುವುದು ಪತ್ತೆಯಾಗಿದೆ. ಪ್ಲಾಸ್ಟಿಕ್ ಕ್ಯಾನ್ಸರ್‌ಕಾರಕ ಅಂಶಗಳನ್ನು ಹೊಂದಿದೆ. ಇದು ಇಡ್ಲಿಗೆ ಸೇರಿದರೆ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ ಎಂದು ಗುರುವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಬಳಸಿದರೆ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದು ಕ್ಯಾನ್ಸರ್‌ಗೆ ಕಾರಣವಾಗಲಿದೆ. ಯಾವುದೇ ಕಾರಣಕ್ಕೂ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿಲ್ಲ. ಬಳಸಿದರೆ ದಂಡ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…