Mysore
25
broken clouds

Social Media

ಸೋಮವಾರ, 26 ಜನವರಿ 2026
Light
Dark

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಾಹಿತಿ ದೇವನೂರು ಮಹಾದೇವ: ಕಾರಣ ಇಷ್ಟೇ.!

cm siddarsmiah

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ನ್ಯಾ.ನಾಗಮೋಹನ್‍ ದಾಸ್ ಸರ್ಕಾರಕ್ಕೆ ನೀಡಿರುವ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ‘ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯವಯಸ್ಕರಾಗುತ್ತಿದ್ದಾರೆ. ಇದು ತುಂಬಾನೆ ದಯನೀಯ ಪರಿಸ್ಥಿತಿ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇಂದು ದಲಿತ ಸಮುದಾಯವೂ ದಿನ ದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆಯಾಗುತ್ತಿರುವುದರಿಂದ ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು’ ಎಂದು ದೇವನೂರು ಮಹಾದೇವ ಸಲಹೆ ನೀಡಿದ್ದಾರೆ.

Tags:
error: Content is protected !!