cm siddarsmiah
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ನ್ಯಾ.ನಾಗಮೋಹನ್ ದಾಸ್ ಸರ್ಕಾರಕ್ಕೆ ನೀಡಿರುವ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ‘ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯವಯಸ್ಕರಾಗುತ್ತಿದ್ದಾರೆ. ಇದು ತುಂಬಾನೆ ದಯನೀಯ ಪರಿಸ್ಥಿತಿ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
‘ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇಂದು ದಲಿತ ಸಮುದಾಯವೂ ದಿನ ದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆಯಾಗುತ್ತಿರುವುದರಿಂದ ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು’ ಎಂದು ದೇವನೂರು ಮಹಾದೇವ ಸಲಹೆ ನೀಡಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…