ರಾಜ್ಯ

ದೇವರಾಜ ಅರಸು ಒಬ್ಬ ಜಾತ್ಯಾತೀತ ವ್ಯಕ್ತಿ, ಸಾಮಾಜಿಕ ನ್ಯಾಯದ ಹರಿಕಾರ: ಸಿದ್ದರಾಮಯ್ಯ

ಬೆಂಗಳೂರು: ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಇರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ದೇವರಾಜ ಅರಸುರವರ 42ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದೇವರಾಜ ಅರಸು ಅವರು ಒಬ್ಬ ಜಾತ್ಯಾತೀತ ವ್ಯಕ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಸಮಾಜದ ತಳವರ್ಗದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೇಲಕ್ಕೆತ್ತುವ, ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಿದರು. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತಂದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಏಕೀಕರಣದ ನಂತರ 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ವರ್ಷ ಅದರ 50ನೇ ವರ್ಷಾಚರಣೆಯ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದರು.

ದೇವರಾಜ ಅರಸು ಅವರು ಬಡವರ, ಶೋಷಿತರ , ಸಾಮಾಜಿಕ ನ್ಯಾಯದ ಪರವಾಗಿದ್ದ ನಾಯಕರು. ಅದಕ್ಕೇ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದು ಉಳುವವನೇ ಒಡೆಯ ಎಂದು ಘೋಷಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದರು.

ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ

ದೇವರಾಜ ಅರಸು ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಎಂಟು ವರ್ಷಗಳ ಕಾಲ ಸಾಮಾಜಿಕ ನ್ಯಾಯದ ಅಡಿಪಾಯ ಹಾಕಿದರು. ಅದರ ಬುನಾದಿಯ ಮೇಲೆ ಸಾಮಾಜಿಕ ನ್ಯಾಯ ಕರ್ನಾಟಕದಲ್ಲಿ ಮುಂದುವರೆದಿದೆ ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ. ಇತರೆ ಪಕ್ಷಗಳಿಗೆ ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲ. ಬದಲಿಗೆ ಅದರ ವಿರುಧ್ಧವಾಗಿದ್ದಾರೆ ಎಂದರು.

ಸಚಿವ ನಾಗೇಂದ್ರ ರಾಜೀನಾಮೆ ಕುರಿತು ಸಿಎಂ ಹೇಳಿದ್ದಿಷ್ಟು
ಸಚಿವ ನಾಗೇಂದ್ರ ಅವರ ರಾಜಿನಾಮೆ ಕುರಿತಂತೆ ಮಾಧ್ಯಮದವರಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಅವರೊಂದಿಗೆ ಮಾತನಾಡಿದ್ದೇನೆ ನೋಡೋಣ ಎಂದರು.

andolana

Recent Posts

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಆರು ನಿರ್ಣಯಗಳನ್ನು ಮಂಡಿಸಿದ ಕಸಾಪ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…

17 mins ago

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

54 mins ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

2 hours ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

2 hours ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

2 hours ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

2 hours ago