ರಾಜ್ಯ

ದೇವೇಗೌಡರಿಗೆ 92ನೇ ಜನ್ಮದಿನ ; ಮೋದಿ, ಸಿದ್ದರಾಮಯ್ಯ ಸೇರಿ ಹಲವರು ಗಣ್ಯದಿಂರ ಶುಭಾಶಯ

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಜೆಡಿಎಸ್‌‍ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಸಮುಖದಲ್ಲಿ ತಮ್ಮ 92ನೇ ಜನದಿನವನ್ನು ಆಚರಿಸಿಕೊಂಡರು.

ಇಂದು ಬೆಳಿಗ್ಗೆ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನವನ್ನು ಕುಟುಂಬ ಸದಸ್ಯರೊಂದಿಗೆ ಪಡೆದು ನಂತರ ಜೆಡಿಎಸ್‌‍ ಕಚೇರಿಯಲ್ಲಿ ಆಯೋಜಿಸಿದ್ದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಗೌಡರು ಪಾಲ್ಗೊಂಡರು.

ಬಳಿಕ ಮಾತನಾಡಿದ ಅವರು, ಕಳೆದ 1986 ರಿಂದಲೂ ನನ್ನ ಹುಟ್ಟುಹಬ್ಬವಾದ ಮೇ 18 ರಂದು ಪ್ರತಿವರ್ಷ ತಿರುಪತಿಗೆ ಹೋಗಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯುತ್ತಿದ್ದೇನೆ. ಆರು ವರ್ಷಗಳ ಹಿಂದೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರ ಜೊತೆಯಲ್ಲಿ ತಿರುಪತಿಗೆ ಹೋಗಿದ್ದೆ. ಅನಂತರ ಮಂಡಿನೋವಿನ ಕಾರಣದಿಂದಾಗಿ ತಿರುಪತಿಗೆ ಹೋಗಿರಲಿಲ್ಲ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಅವರು ತಿರುಮಲದಲ್ಲಿ 12 ಕೊಠಡಿಗಳ ಅತಿಥಿಗೃಹ ನಿರ್ಮಾಣ ಮಾಡಿದ್ದಾರೆ. ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು.

ಕುಮಾರಸ್ವಾಮಿಯವರಿಗೆ ನವದೆಹಲಿಯಲ್ಲಿ ಹೊಸಮನೆಯನ್ನು ಕೇಂದ್ರ ಸರ್ಕಾರ ಕೊಟ್ಟಿದೆ. ನಾಳೆ ಆ ಮನೆ ಪ್ರವೇಶವನ್ನು ಮಾಡುತ್ತಾರೆ. ಪ್ರಧಾನಿ ನರೇಂದ್ರಿ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಷಾ ಸೇರಿದಂತೆ ಹಲವು ನಾಯಕರು ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ.

ಪ್ರಧಾನಿ ಹಾಗೂ ಅಮಿತ್‌ ಷಾ ಅವರು ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ರಾಷ್ಟ್ರಪತಿಗಳು, ಮಾಜಿ ರಾಷ್ಟ್ರಪತಿಗಳು, ರಾಜ್ಯಪಾಲರು ಕೂಡ ಶುಭಾಶಯ ಕೋರಿದ್ದಾರೆ.

ನಾನು ಪಕ್ಷದ ಒಬ್ಬ ಕಾರ್ಯಕರ್ತನಾಗಿ ಸಾಧ್ಯವಾದಷ್ಟು ಕೆಲಸ ಮಾಡುತ್ತೇನೆ. ವ್ಹೀಲ್‌ಚೇರ್‌ನಲ್ಲಿ ರಾಜ್ಯಸಭೆಗೆ ಹೋಗುತ್ತೇನೆ. ರಾಜ್ಯದ ಸಮಸ್ಯೆಗಳ ಬಗ್ಗೆ ಯಾವುದೇ ಅಂಜಿಕೆ ಇಲ್ಲದೆ ಮಾತನಾಡುತ್ತೇನೆ ಎಂದರು.

ಮೋದಿ, ಸಿದ್ದರಾಮಯ್ಯ ಸೇರಿ ಹಲವರಿಂದ ಶುಭಾಶಯ ಮಾಜಿ ಪ್ರಧಾನಿ ದೇವೇಗೌಡರಿಗೆ, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ರಾಷ್ಟ್ರದ ಹಲವು ನಾಯಕರು ಶುಭಾಶಯ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

4 mins ago

ಚಿರತೆ ದಾಳಿ: ಇಬ್ಬರಿಗೆ ಗಾಯ

ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ…

13 mins ago

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

8 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

9 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

10 hours ago