ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಸುರಿದ ಉತ್ತಮ ಮಳೆಯ ನಡುವೆಯೂ ಈ ಬಾರಿ ಬಿಸಿಲು ಹೆಚ್ಚಳವಾಗಿದ್ದು, ಕಾಡ್ಗಿಚ್ಚಿನ ಅಪಾಯ ಎದುರಿಸಲು ಸರ್ವಸನ್ನದ್ಧರಾಗಿರುವಂತೆ ಸೂಚನೆ ನೀಡಿದರು.
ಪದೇ ಪದೇ ಕಾಡ್ಗಿಚ್ಚು ಸಂಭವಿಸುವ ಪ್ರದೇಶಗಳಲ್ಲಿ ಬೆಂಕಿರೇಖೆ ನಿರ್ಮಿಸಲು, ದೈನಂದಿನ ಆಧಾರದಲ್ಲಿ ಪರಾಮರ್ಶೆ ನಡೆಸಿ, ಕಾಡ್ಗಿಚ್ಚು ನಿಯಂತ್ರಣ ಯೋಜನೆ ರೂಪಿಸಿ, ಕ್ಷೇತ್ರಮಟ್ಟದ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ ಬೆಂಕಿಯಿಂದ ಕಾಡು ನಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಕಿಡಿಗೇಡಿಗಳು ಕಾಡಿಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದರೆ ಅಂತಹವರ ವಿರುದ್ಧ ಎಫ್ಐ.ಆರ್. ದಾಖಲಿಸಲು ಮತ್ತು ಪೊಲೀಸ್ ನೆರವು ಪಡೆಯಲು ಸೂಚಿಸಿದ ಸಚಿವರು, ಗ್ರಾಮಸಭೆ, ಸಮುದಾಯ ಸಭೆ ನಡೆಸುವ ಮೂಲಕ ಕಾಡ್ಗಿಚ್ಚು ಕಾಣಿಸಿಕೊಳ್ಳದಂತೆ ಮತ್ತು ಕಾಡ್ಗಿಚ್ಚು ಕಾಣಿಸಿಕೊಂಡ ಕೂಡಲೆ ಅದನ್ನು ನಂದಿಸಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…