Mysore
24
mist

Social Media

ಶುಕ್ರವಾರ, 14 ನವೆಂಬರ್ 2025
Light
Dark

ನ್ಯಾಯಯುತ ತೆರಿಗೆ ಪಾಲು ಬಂದರೆ ಅಭಿವೃದ್ಧಿ ಸಾಧ್ಯ: ಸಿಎಂ

ಬೆಳಗಾವಿ: ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲನ್ನು ಕೇಂದ್ರ ನೀಡಿದರೆ, ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾನುವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾಗಿದ್ದ ತೆರಿಗೆ ಪಾಲು ನೀಡದೇ, ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿರುವ ನಮಗೆ ಅನ್ಯಾಯವಾಗಬಾರದು. ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತದ ಬಿಜೆಪಿಯವರು, ಕೇವಲ ಕೋಮುವಾದಿ ಕ್ಷುಲ್ಲಕ ವಿಚಾರಗಳಿಗೆ ಪ್ರತಿಭಟನೆ ಮಾಡುತ್ತಾರೆ ಎಂದು ಕಿಡಿಕಾರಿದರು.

ಬೆಳಗಾವಿ ಅಧಿವೇಶನದ ವೇಳೆಗೆ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ವಿಜಯೇಂದ್ರ ಅವರ ತಂದೆ ಯಡಿಯೂರಪ್ಪನವರು ವಿರುದ್ದ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಮ್ಮ ಮೇಲೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆ ಇದೆ ? ಕಾಂಗ್ರೆಸ್ ಸರ್ಕಾರಕ್ಕೆ ಜನ ನೀಡುತ್ತಿರುವ ಬೆಂಬಲವನ್ನು ಸಹಿಸಲಾಗದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

Tags:
error: Content is protected !!