Nikhil kumaraswamy
ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಮೆಟ್ರೋ ಶಂಕು ಸ್ಥಾಪನೆ ಮಾಡಿದ್ದೇ ಎಚ್.ಡಿ.ಕುಮಾರಸ್ವಾಮಿ. ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಫ್ಲೈಓವರ್ ಕಾನ್ಸೆಪ್ಟ್ ತಂದಿದ್ದ ಎಚ್.ಡಿ.ದೇವೇಗೌಡರು, ಕಾವೇರಿ 4ನೇ ಹಂತದ ಯೋಜನೆ ತಂದಿದ್ದು ಸಹ ದೇವೇಗೌಡರು. ಎಚ್‌ಡಿಡಿ ಅವರು ಯಾರೂ ಅಳಿಸಲಾಗದಷ್ಟು ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಬಿಬಿಎಂಪಿ ರಚಿಸಿದರು. ಈಗ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಕುಸಿದಿವೆ. ಬಿಬಿಎಂಪಿ ಬದಲಿಸಿ ಜಿಬಿಎ ಮಾಡಿದ್ದೇ ಇವರ ಸಾಧನೆ. ಜಿ ಎಂದರೆ ಗಾರ್ಬೇಜ್ ಬಿ ಎಂದರೇ ಬ್ಯಾಡ್‌ರೋಡ್ ಎ ಎಂದರೆ ಎ ಖಾತೆ ಸ್ಕ್ಯಾಮ್. ಇದು ಜಿಬಿಎ ಎಂದು ಟೀಕೆ ಮಾಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…