ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಸ್ ಅವರ ಹತ್ಯೆ ಪ್ರಕರಣ ಸಂಬಂಧ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ವೇಳೆ ಅನೇಕ ಸ್ಫೋಟಕ ಅಂಶಗಳಯ ಹೊರಬೀಳುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡಿಜಿಪಿ ಪತ್ನಿ ಪಲ್ಲವಿ ಹೇಳಿದ್ದೇನು?
ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಆಗಾಗ್ಗ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಬೆಳಗ್ಗೆಯಿಂದ ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು
ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಬೇಕಾಯಿತು. ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದಾರೆ.





