ಉಡುಪಿ: ಕಾಡಿನಲ್ಲಿ ಅಡಗಿರುವ ನಕ್ಸಲರಿಗೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಡೆದ ಸ್ಥಳಕ್ಕೆ ಭೇಟಿ ನೀಡಿ ಫಟನೆ ಬಗ್ಗೆ ಪೂರ್ಣ ಮಾಹಿತಿ ಪಡೆದ ಅವರು, ನೀವು ಎಲ್ಲೇ ಅಡಗಿದ್ದರೂ ನಾವು ಬಿಡಲ್ಲ. ನಿಮ್ಮ ವಿರುದ್ಧ ಕಾರ್ಯಾಚರಣೆ ನಡೆಸುವ ಮೊದಲು ನೀವೇ ಬಂದು ಶರಣಾಗಿ. ಇಲ್ಲದಿದ್ದರೆ ನಮಗೆ ಕಾರ್ಯಾಚರಣೆ ಹೊರತು ಬೇರೆ ದಾರಿಯಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನು ಪೀತಂಬೈಲ್, ಕಬ್ಬಿನಾಲೆ ಬಚ್ಚಪ್ಪು ಪರಿಸರದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಂಡಿದ್ದು, ಡಿಜಿಪಿ ಪ್ರಣಬ್ ಮೊಹಂತಿ ಸೂಚನೆ ಮೇರೆಗೆ ಕೂಂಬಿಂಗ್ ಕಾರ್ಯಾಚರಣೆ ಮತ್ತಷ್ಟು ಚುರುಕಾಗಿದೆ ಎನ್ನಲಾಗಿದೆ.