ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಮಚಂದ್ರರಾವ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಮಚಂದ್ರರಾವ್‌ರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಎಷ್ಟೇ ದೊಡ್ಡ ಅಧಿಕಾರಿಯಾದರೂ ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದರು. ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಲೀಂ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ರಾಮಚಂದ್ರರಾವ್‌ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.





