jds manju
ಬೆಂಗಳೂರು: ಧರ್ಮಸ್ಥಳ ಪವಿತ್ರ ಧಾರ್ಮಿಕ ಸ್ಥಳವಾಗಿದ್ದು, ಭಕ್ತರು ಇಟ್ಟಿರುವ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಜೆಡಿಎಸ್ ಶಾಸಕ ಎ.ಮಂಜು ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್‍ಐಟಿ ತನಿಖೆ ಮಾಡಿದೆ. ತನಿಖೆಗೆ ಸಂಪೂರ್ಣ ಸಹಕಾರವನ್ನು ಕೊಟ್ಟಿದೆ. ಧರ್ಮಸ್ಥಳದ ಸುತ್ತಮುತ್ತ ಹೂಳಲಾಗಿದೆ ಎನ್ನಲಾದ ಶವಗಳಿಗಾಗಿ ಎಸ್‍ಐಟಿ ಶೋಧವನ್ನು ಕೈಗೊಂಡಿದೆ. ತನಿಖೆಯ ನಂತರ ಯಾವ ಅಂಶಗಳು ಹೊರಬರುತ್ತವೋ ಕಾದು ನೋಡೋಣ ಎಂದರು.
ತಂತ್ರಜ್ಞಾನವನ್ನು ಬಳಸಿ ಅಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಗುರುತರವಾದ ಸಾಕ್ಷ್ಯ ಅಥವಾ ಅಸ್ತಿ ಸಿಕ್ಕಿಲ್ಲ ಎಂದು ವರದಿಯಾಗಿದೆ. ಈ ರೀತಿ ತಪ್ಪು ಮಾಹಿತಿ ನೀಡಿದ್ದರೆ ಅಂಥವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.
ಧರ್ಮಸ್ಥಳದಲ್ಲಿರುವ ದೇವರಿಗಾಗಲಿ, ಅಣ್ಣಪ್ಪಸ್ವಾಮಿಗಾಗಲಿ ಯಾವುದೇ ರೀತಿಯ ಕೆಟ್ಟದಾಗಲು ಈ ಸಮಾಜ ಒಪ್ಪುವುದಿಲ್ಲ. ಅಂತಹ ನಂಬಿಕೆಯನ್ನು ಭಕ್ತರು ಹೊಂದಿದ್ದಾರೆ. ಒಂದು ವೇಳೆ ವೈಯಕ್ತಿಕವಾಗಿ ಯಾವುದಾದರೂ ತಪ್ಪುಗಳು ನಡೆದಿದ್ದರೆ ಎಸ್‍ಐಟಿ ತನಿಖೆಯಿಂದ ಸತ್ಯಾಂಶ ಹೊರಬರಲಿ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…