Mysore
28
broken clouds

Social Media

ಭಾನುವಾರ, 25 ಜನವರಿ 2026
Light
Dark

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ

dharmasthala

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ಶುರುವಾಗಿದೆ.

ನಿನ್ನೆ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು.

ಆ ಸ್ಥಳಗಳಿಗೆ ಆಗಮಿಸಿರುವ ಎಸ್‌ಐಟಿ ಗುರುತು ಮಾಡಿರುವ ಸ್ಥಳಗಳನ್ನು ಅಗೆಯಲು ಕಾರ್ಮಿಕರನ್ನು ಕರೆಸಿದೆ. ಈಗಾಗಲೇ ಕಾರ್ಮಿಕರು ಹಾರೆ, ಪಿಕಾಸಿಯೊಂದಿಗೆ ನೆಲ ಅಗೆಯುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಇನ್ನು ನಿನ್ನೆ ಶವಗಳನ್ನು ಹೂತು ಹಾಕಿರುವುದಾಗಿ ಹೇಳಲಾದ ಸ್ಥಳಗಳಲ್ಲಿ ಮಹಜರು ನಡೆಸಲಾಗಿತ್ತು. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾನೆ.

Tags:
error: Content is protected !!