Mysore
25
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಇಂದು 6ನೇ ಸ್ಥಳದಲ್ಲಿ ಶೋಧಕಾರ್ಯ

Dharmasthala case PAN card torn blouse found excavation continues

ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಅನಾಮಧೇಯ ವ್ಯಕ್ತಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆತ ತೋರಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಮಣ್ಣನ್ನು ಅಗೆದು ಅಸ್ಥಿಪಂಜರಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಇಂದು ಮೂರನೇ ದಿನದ ಕಾರ್ಯಾಚರಣೆ ಆರಂಭವಾಗಿದೆ.

ಈಗಾಗಲೇ ಐದು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಇದುವರೆಗೂ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿಲ್ಲ. ಇಂದು ನೇತ್ರಾವತಿ ನದಿ ದಡದಲ್ಲಿ 6ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Tags:
error: Content is protected !!