ರಾಜ್ಯ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್:‌ ರತ್ನಗಿರಿ ಬೆಟ್ಟದಲ್ಲಿ ಅಸ್ಥಿಪಂಜರಕ್ಕಾಗಿ ಶೋಧಕಾರ್ಯ

ಧರ್ಮಸ್ಥಳ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೂರುದಾರ ತೋರಿಸಿರುವ 16ನೇ ಪಾಯಿಂಟ್‌ನಲ್ಲಿ ಎಸ್‌ಐಟಿ ತಂಡ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಮಾಸ್ಕ್‌ ಮ್ಯಾನ್‌ ದೂರುದಾರ ತೋರಿಸಿರುವ ಜಾಗ ಧರ್ಮಸ್ಥಳದ ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ ತಪ್ಪಲಿನಲ್ಲಿ 16ನೇ ಪಾಯಿಂಟ್‌ ಎಂದು ಗುರುತಿಸಲಾಗಿದ್ದು, ಅಲ್ಲಿ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ ಮ್ಯಾನ್‌ ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ ಎಂದು ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಬಂದು ಇಬ್ಬರು ಸ್ಥಳೀಯರು ದೂರು ನೀಡಿದ್ದಾರೆ.

ನಮ್ಮನ್ನು ಕರೆದುಕೊಂಡು ಹೋಗಿ, ನಾವು ಜಾಗ ತೋರಿಸುತ್ತೇವೆ. ನಾವು ತೋರಿಸಿದ ಜಾಗವನ್ನು ಶೋಧ ಮಾಡಿ ಎಂದು ಎಸ್‌ಐಟಿಗೆ ಮನವಿ ಸಲ್ಲಿಸಿದ್ದಾರೆ. ಮನವಿ ಪಡೆದ ಎಸ್‌ಐಟಿ ಧರ್ಮಸ್ಥಳ ಠಾಣೆಗೆ ಅಧಿಕೃತ ದೂರು ನೀಡುವಂತೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

37 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

39 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

41 mins ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

4 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

4 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

4 hours ago