Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್:‌ ಏಕಕಾಲದಲ್ಲಿ 3 ಸಮಾಧಿ ಅಗೆಯುವ ಕಾರ್ಯ ಆರಂಭ

dharmastal case

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ.

ಸ್ಥಳಕ್ಕೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ದೂರುದಾರನಿಂದ ಇಂಚಿಂಚೂ ಮಾಹಿತಿ ಕಲೆಹಾಕುತ್ತಿದ್ದು, ಇಂದು ಮೂರು ಕಡೆ ಏಕಕಾಲದಲ್ಲಿ ಅಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಸಮಾಧಿ ಅಗೆಯುವ ಪ್ರಕ್ರಿಯೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಮೂರು ಸಮಾಧಿ ಅಗೆಯುವ ಕಾರ್ಯ ಪ್ರಗತಿಯಲ್ಲಿದೆ.

ಸೋಮವಾರ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳನ್ನು ಮಾರ್ಕ್‌ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಇಂದು ಏಕಕಾಲದಲ್ಲಿ ಮೂರು ಜಾಗಗಳನ್ನು ಅಗೆಯುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾನೆ. ವಿಧಿ ವಿಜ್ಞಾನ ತಜ್ಞರು, ಭದ್ರತಾ ಸಿಬ್ಬಂದಿ ದೂರುದಾರನೊಂದಿಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ನಿನ್ನೆಯಿಂದ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ಸಂಜೆಯವರೆಗೂ ಸ್ಥಳ ಅಗೆಯುವ ಕಾರ್ಯ ನಡೆದಿದ್ದು, ಯಾವುದೇ ಶವ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಏಕಕಾಲದಲ್ಲಿ ಮೂರು ಕಡೆ ಸ್ಥಳ ಅಗೆಯುವ ಕೆಲಸ ನಡೆಯುತ್ತಿದೆ.

Tags:
error: Content is protected !!