dharmastal case
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ.
ಸ್ಥಳಕ್ಕೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ದೂರುದಾರನಿಂದ ಇಂಚಿಂಚೂ ಮಾಹಿತಿ ಕಲೆಹಾಕುತ್ತಿದ್ದು, ಇಂದು ಮೂರು ಕಡೆ ಏಕಕಾಲದಲ್ಲಿ ಅಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಸಮಾಧಿ ಅಗೆಯುವ ಪ್ರಕ್ರಿಯೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಮೂರು ಸಮಾಧಿ ಅಗೆಯುವ ಕಾರ್ಯ ಪ್ರಗತಿಯಲ್ಲಿದೆ.
ಸೋಮವಾರ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳನ್ನು ಮಾರ್ಕ್ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಇಂದು ಏಕಕಾಲದಲ್ಲಿ ಮೂರು ಜಾಗಗಳನ್ನು ಅಗೆಯುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾನೆ. ವಿಧಿ ವಿಜ್ಞಾನ ತಜ್ಞರು, ಭದ್ರತಾ ಸಿಬ್ಬಂದಿ ದೂರುದಾರನೊಂದಿಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ನಿನ್ನೆಯಿಂದ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ಸಂಜೆಯವರೆಗೂ ಸ್ಥಳ ಅಗೆಯುವ ಕಾರ್ಯ ನಡೆದಿದ್ದು, ಯಾವುದೇ ಶವ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಏಕಕಾಲದಲ್ಲಿ ಮೂರು ಕಡೆ ಸ್ಥಳ ಅಗೆಯುವ ಕೆಲಸ ನಡೆಯುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…