ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ನಾಲ್ವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಹಾಗೂ ವಿಠಲಗೌಡ ಅವರಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಅಕ್ಟೋಬರ್.27ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಖಡಕ್ ಎಚ್ಚರಿಕೆ ನೀಡಲಾಗಿದ್ದು, ಹಲವು ಅಂಶಗಳನ್ನು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.





