ರಾಜ್ಯ

ಧರ್ಮಸ್ಥಳ ಪ್ರಕರಣ | 100 ಮೂಳೆಗಳು, ತಲೆ ಬುರುಡೆ ಪತ್ತೆ

ಧರ್ಮಸ್ಥಳ : ಸೋಮವಾರ ನಡೆದ ಉತ್ಖನನ ವೇಳೆ ಸುಮಾರು 100 ಮೂಳೆಗಳು ಮತ್ತು ತಲೆಬುರುಡೆ ಪತ್ತೆಯಾಗಿದ್ದವು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ಸ್ನಾನಘಟ್ಟ ಬಳಿಯ ಅರಣ್ಯ ಪ್ರದೇಶದಲ್ಲಿ ಆರನೇ ದಿನದಲ್ಲಿ ಈ ಅವಶೇಷಗಳು ಪತ್ತೆಯಾಗಿದ್ದು, ತಲೆಬುರುಡೆ, ಬೆನ್ನುಮೂಳೆಯ ಮೂಳೆಗಳು ಸೇರಿದಂತೆ ಸುಮಾರು 100 ಮೂಳೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ದೂರುದಾರ ತೋರಿಸಿದ 11ನೇ ಸ್ಥಳದಿಂದ ಸುಮಾರು 100 ಮೀಟರ್ ಅಂತರದಲ್ಲಿ ಈ ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ. ಪತ್ತೆಯಾದ ಅಸ್ಥಿಪಂಜರದ ಭಾಗಗಳು ಇಬ್ಬರು ವ್ಯಕ್ತಿಗಳಿಗೆ ಸೇರಿರಬಹುದು ಎನ್ನಲಾಗಿದೆ. ಉದ್ದವಾದ ಬೆನ್ನುಮೂಳೆಯ ಪಟ್ಟಿ ಕೂಡ ಕಂಡುಬಂದಿದೆ. ತಜ್ಞರ ತಂಡ ವೈಜ್ಞಾನಿಕವಾಗಿ ಇವುಗಳನ್ನು ಸಂಗ್ರಹಿಸಿದೆ.

ಕುತೂಹಲ ಮೂಡಿಸಿದ ದೂರುದಾರನ ನಡೆ:- ದೂರುದಾರ ಈ ಹಿಂದೆ ಧರ್ಮಸ್ಥಳ ಸ್ನಾನಘಟ್ಟದ ಬಳಿ ಮತ್ತು ಅರಣ್ಯದೊಳಗೆ 13 ಶವ ಹೂತಿಟ್ಟ 13 ಸಂಭವನೀಯ ಜಾಗಗಳನ್ನು ಗುರುತಿಸಿದ್ದರು. ಇವುಗಳಲ್ಲಿ 11 ಜಾಗಗಳಲ್ಲಿ ಇಲ್ಲಿಯವರೆಗೆ ಉತ್ಖನನ ಮಾಡಲಾಗಿದೆ. ಸೋಮವಾರ 11ನೇ ಜಾಗದಲ್ಲಿ ಜಾಗ ಅಗೆಯುವಿಕೆಗೆ ನಿರ್ಧರಿಸಲಾಗಿತ್ತು. ಆದರೆ, ದೂರುದಾರ ಅದರ ಬದಲಾಗಿ ಹತ್ತಿರದ ಬೇರೆ ಸ್ಥಳದಲ್ಲಿ ಅಗೆಯಲು ಮನವಿ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

4 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

4 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

4 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

4 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

4 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago