ರಾಜ್ಯ

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ದಿಕ್ಕು ತಪ್ಪಿಸುತ್ತಿರುವ ಸಹಾಯಕ ಪೊಲೀಸ್‌ ಆಯುಕ್ತರು

ಬೆಂಗಳೂರು : ಧರ್ಮಸ್ಥಳದಲ್ಲಿ ಅನೇಕ ಶವ ಹೂತಿಡಲಾಗಿದೆ ಎಂಬ ಅನಾಮಿಕ ವ್ಯಕ್ತಿಯ ದೂರಿನ ಮೇರೆಗೆ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳಿಗೆ ಸಹಾಯಕ ಪೊಲೀಸ್‌‍ ಆಯುಕ್ತರೊಬ್ಬರು ದಿಕ್ಕು ತಪ್ಪಿಸಿದ ಪ್ರಸಂಗ ಬೆಳಕಿಗೆ ಬಂದಿದೆ.

ಸೋಮವಾರ ಧರ್ಮಸ್ಥಳದ ಸ್ನಾನಘಟ್ಟದ 11 ನೇ ಸ್ಥಳದಲ್ಲಿ ಎಸ್‌‍ಐಟಿ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ, ಬೆಳ್ತಂಗಡಿ ತಹಸೀಲ್ದಾರಿ ಸೇರಿದಂತೆ ಮತ್ತಿತರರ ಸಮುಖದಲ್ಲಿ ಉತ್ಖನನ ಕಾರ್ಯ ನಡೆಸುತ್ತಿದ್ದರು. ಅನಾಮಧೇಯ ವ್ಯಕ್ತಿ ನೀಡಿದ ದೂರಿನಂತೆ 11ನೇ ಸ್ಥಳವಾದ ಸ್ನಾನಘಟ್ಟದಲ್ಲಿ ಉತ್ಖನನ ಕಾರ್ಯ ನಡೆಸುವ ಬದಲು ಎಸಿಯವರು ಬೇರೊಂದು ಸ್ಥಳವನ್ನು ಗುರುತಿಸಿ ಇಲ್ಲಿಯೇ ಉತ್ಖನನ ನಡೆಸಬೇಕೆಂದು ಕಾರ್ಮಿಕರಿಗೆ ಸೂಚನೆ ಕೊಟ್ಟಿದ್ದರು. ಇದು ಸ್ಥಳದಲ್ಲಿದ್ದ ಎಸ್‌‍ಐಟಿ ಅಧಿಕಾರಿಗಳಿಗೂ ತಕ್ಷಣವೇ ಹೊಳೆದಿರಲಿಲ್ಲ.

ಎಸಿ ಯವರು ಯಾವ ಕಾರಣಕ್ಕಾಗಿ 11ನೇ ಸ್ಥಳವನ್ನು ಬಿಟ್ಟು ಬೇರೊಂದು ಕಡೆ ಉತ್ಖನನ ನಡೆಸಿದರು ಎಂಬುದು ನಿಗೂಢವಾಗಿಯೇ ಉಳಿದಿದೆ. ಕೆಲವೇ ಮೀಟರ್‌ಗಳ ಅಂತರದಲ್ಲಿ ಉತ್ಖನನ ನಡೆಯುತ್ತಿದ್ದ ವೇಳೆ ಮಾನವನ ಅಸ್ಥಿಪಂಜರ ಪತ್ತೆಯಾಗಿತ್ತು. ಈಗ ಎಸಿ ನಡೆ ಹಲವು ಸಂಶಯಗಳನ್ನು ಹುಟ್ಟುಹಾಕಿದ್ದು, ಎಸ್‌‍ಐಟಿ ಅಧಿಕಾರಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

43 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

45 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

48 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

52 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

56 mins ago