ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ನಾಲ್ವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಟಿ.ಜಯಂತ್, ವಿಠಲಗೌಡ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ವಿಚಾರಣೆ ನಡೆಯಲಿದೆ.
ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ತನಿಖಾ ತಂಡ ಅಂತಿಮ ಹಂತದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದೆ. ಬುರುಡೆ ಗ್ಯಾಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಚಾರ್ಜ್‌ಶೀಟ್ ತಡೆಯುವ ನಿಟ್ಟಿನಲ್ಲಿ ಬುರುಡೆ ಗ್ಯಾಂಗ್ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಕೋರ್ಟ್ ಮೊರೆ ಹೋಗಿದೆ.
ಇದನ್ನೂ ಓದಿ:-ಮಂಡ್ಯ| ಟಿಪ್ಪರ್ ಹಾಗೂ ಕಾರಿನ ನಡುವೆ ಡಿಕ್ಕಿ: ಓರ್ವ ಸಜೀವ ದಹನ





