ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ನೀಡಿರುವ ಸುದೀರ್ಘ ಉತ್ತರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಯಾರು ಷಡ್ಯಂತ್ರ ಮಾಡಿದವರು ಎಂಬುದನ್ನು ಸಂದರ್ಭ ಬಂದಾಗ ಹೇಳುತ್ತೇನೆ ಎಂದಿದ್ದಾರೆ. ಷಡ್ಯಂತ್ರ ಮಾಡಿದವರು ಯಾರು? ಮೊದಲು ಬಹಿರಂಗಪಡಿಸಲಿ ಎಂದು ಪಟ್ಟು ಹಿಡಿದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಧರ್ಮಸ್ಥಳ ಕ್ಷೇತ್ರದ ಬಗ್ಗೆ ನಮಗೂ ಭಕ್ತಿ, ಗೌರವವಿದೆ. ನಾವು ಯಾರೂ ಕೂಡ ರಾಜಕೀಯ ಮಾಡುತ್ತಿಲ್ಲ. ಬಿಜೆಪಿಯವರು ಧರ್ಮದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.





