ರಾಜ್ಯ

ಧರ್ಮಸ್ಥಳ ಪ್ರಕರಣ : ಡಾ.ವೀರೇಂದ್ರ ಹೆಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ಆರಂಭಿಸಿದ ನಂತರ ಮೊದಲ ಬಾರಿ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಡಾ.ವೀರೇಂದ್ರ ಹೆಗಡೆ, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಠಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ. ʻಎಸ್ಐಟಿʼ ತನಿಖೆಯಿಂದ ಸತ್ಯ ಹೊರ ಬರಲಿದೆ ಎಂದು ಹೇಳಿದ್ದಾರೆ.

ಈ ಆರೋಪಗಳ ತನಿಖೆಗಾಗಿ, ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದೆ. ಇದು ಅಂತಿಮವಾಗಿ ಮಾನವ ಅವಶೇಷಗಳನ್ನು ಪತ್ತೆಹಚ್ಚಲು ಹಲವಾರು ಸ್ಥಳಗಳಲ್ಲಿ ಉತ್ಖನನ ನಡೆಸಿದೆ.
ಅಕ್ಟೋಬರ್ 9, 2012 ರಂದು ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ(17) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಬಾಲಕಿಯ ನ್ಯಾಯಕ್ಕಾಗಿ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಆರೋಪಗಳು ಆಧಾರರಹಿತ ಮತ್ತು ಸುಳ್ಳು ಆರೋಪಗಳು. ಇದರಿಂದ ನನಗೆ ನಿಜವಾಗಿಯೂ ನೋವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಷಯಗಳನ್ನು ಬಿಂಬಿಸುವ ರೀತಿ ನೈತಿಕವಾಗಿ ತಪ್ಪು ಎಂದು ಹೇಳಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ ಅವರು ವಿಧಾನಸಭೆಯಲ್ಲಿ ಎಸ್‌ಐಟಿ ಸಮಸ್ಯೆಯ ಆಳಕ್ಕೆ ಹೋಗುತ್ತದೆ ಎಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಗ್ಗಡೆ, ನಾವು ಅದೇ ದಿನ ಎಸ್‌ಐಟಿಯನ್ನು ಸ್ವಾಗತಿಸಿದ್ದೇವೆ. ರಾಜ್ಯ ಸರ್ಕಾರ ಎಸ್ ಐಟಿ ರಚಿಸಿರುವುದು ಒಳ್ಳೆಯದು ಮತ್ತು ಸತ್ಯ ಒಮ್ಮೆ ಹೊರಬರಬೇಕು. ಆರೋಪ ಕೇಳಿಬಂದಾಗ ತನಿಖೆ ಮಾಡುವುದು ಒಳ್ಳೆಯದು. ಇಲ್ಲದಿದ್ದರೆ ಅವು ಹಾಗೆಯೇ ಉಳಿಯುತ್ತವೆ ಎಂದಿದ್ದಾರೆ.

ಸಿಬಿಐ ತನಿಖೆಗೂ ಸಹಕಾರ
ಎಸ್‌ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

6 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

8 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

13 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

13 hours ago