ರಾಜ್ಯ

ಧರ್ಮಸ್ಥಳ ಕೇಸ್: ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಸಬಾರದು ಎಂದ ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್‌ಐಟಿ ತನಿಖೆಯಾಗಬೇಕು.
ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲೀಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ‌ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.

ಇನ್ನು ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬರುವ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆ ಆಗುತ್ತದೆ. ಯಾರು ಏನೇ ಹೇಳಿದರು. ಆಗುವ ಬೆಳವಣಿಗೆಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಇದೇ ವೇಳೆ ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಅವರು ಒಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಒಟ್ಟು ಗೂಡಿಸುವ ಅಗತ್ಯವಿಲ್ಲ. ಅವರು ಮೊದಲಿನಿಂದಲೂ ಒಟ್ಟಾಗಿದ್ದಾರೆ. ರಾಜಕೀಯಕ್ಕೆ ಬರುವ ಮುಂಚಿನಿಂದಲೂ ಅವರ ಸ್ನೇಹ ಗಾಢವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago