ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ಸಮರ್ಪಕ ತನಿಖೆಯಾಗಲಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣದ ತನಿಖೆಗೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ.
ಎಸ್‌ಐಟಿಯಿಂದ ಸಮರ್ಪಕ ತನಿಖೆ ನಡೆಸಿ ಸತ್ಯ ಸಂಗತಿ ಹೊರಬಂದು ಕಾನೂನು ಕ್ರಮ ಕೈಗೊಳ್ಳಲಿ. ಆದರೆ ತನಿಖೆಗೂ ಮುನ್ನವೇ ಪೂರ್ವಾಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಪವಿತ್ರ ಕ್ಷೇತ್ರಕೆ ಧಕ್ಕೆ ತರುವ ಕೆಲಸ ಆಗಬಾರದು. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.





