dharmastala
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಮುಸುಕುಧಾರಿಯ ಮುಸುಕು ತೆಗೆಯಿರಿ ಎಂದು ಬಿಜೆಪಿ ಆಗ್ರಹಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಪಕ್ಷ, ಧರ್ಮಸ್ಥಳ, ಪುಣ್ಯಸ್ಥಳ, ಪವಿತ್ರ ಸ್ಥಳಕ್ಕೆ ಆವರಿಸಿರುವ ಕಾರ್ಮೋಡವನ್ನು ಸರಿಸಲು ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಹೆಜ್ಜೆಯಿರಿಸಬೇಕಾಗಿದೆ. ಮುಸುಕು ಹಾಕಿಕೊಂಡಿರುವ ಅನಾಮಿಕನ ಮೇಲೆ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಿದರೆ ನಗರ ನಕ್ಸಲರ ಕೈವಾಡ ಬಯಲಾಗಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಅವರು ಅನಾಮಿಕ ದೂರು ನೀಡಿದ ಕೂಡಲೇ ಅಮಾನಿಕನನ್ನೇ ಬ್ರೈನ್ ಮ್ಯಾಪಿಂಗ್ ಮಾಡಲು ಉದ್ದೇಶಿಸಿದ್ದೂ ಸರ್ಕಾರ ಎಡಪಂಥೀಯರ ಒತ್ತಡಕ್ಕೆ ಮಣಿದು ಸಿಎಂ ಸಿದ್ದರಾಮಯ್ಯ ಅವರು ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಬ್ರೈನ್ ಮ್ಯಾಪಿಂಗ್ ಆಗದಂತೆ ನೋಡಿಕೊಂಡ ಪರಿಣಾಮ ಇಂದು ಪುಣ್ಯಕ್ಷೇತ್ರವೊಂದರ ಬಗ್ಗೆ ಅಪಪ್ರಚಾರ ನಡೆಯುತ್ತಿದೆ.
ಸರ್ಕಾರ ಕೇವಲ ಅನಾಮಿಕನ ಹಿಂದೆ ಬೀಳದೇ ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸುತ್ತಿರುವ ಎಲ್ಲರನ್ನೂ ಬಂಧಿಸಿ ತನಿಖೆ ನಡೆಸಬೇಕು. ನಂಬಿಕೆ ಹಾಳುಗೆಡಹುವ ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ಬಿಜೆಪಿ ಬೆಂಬಲಿಸಲಿದೆ ಹಾಗೂ ಯಾವುದೇ ಕ್ರಮಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಕ್ಕೂ ಬಿಜೆಪಿ ಬದ್ಧವಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…