ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ಎರಡನೇ ಭಾರಿಗೆ ಹಾಜರಾಗಲು ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗಲು ನೋಟಿಸ್ ಜಾರಿ ಮಾಡಿದೆ.
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10 :30 ಕ್ಕೆ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡನಿಗೆ ಅ.24 ರಂದು ನೋಟಿಸ್ ಜಾರಿ ಮಾಡಿದ್ದಾರೆ.
ಸೋಮವಾರ ವಿಚಾರಣೆಗೆ ಹಾಜರಾಗದಿದ್ದಲ್ಲಿ BNS 35(3) ಅಡಿಯಲ್ಲಿ ಬಂಧಿಸಲಾಗುವುದು ಎಂದು 9 ನಿರ್ದೇಶನ ಪಾಲಿಸುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.





