ರಾಜ್ಯ

ಧರ್ಮಸ್ಥಳ ಪ್ರಕರಣ | ಎಸ್‌ಐಟಿಗೆ 20 ಅಧಿಕಾರಿಗಳ ಬಲ

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ಅಸಹಜ ಸಾವು ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತಂಡಕ್ಕೆ ಇನ್ನೂ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಿದೆ. ವ್ಯಾಪಕ ಸಾರ್ವಜನಿಕ ಆಕೋಶಕ್ಕೆ ಕಾರಣವಾಗಿರುವ ಗೊಂದಲದ ಆರೋಪಗಳ ಬಗ್ಗೆ ಈ ತಂಡವು ಸಮಗ್ರ ತನಿಖೆ ನಡೆಸಲಿದೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅಸಹಜ ಸಾವುಗಳ ಕುರಿತಾಗಿ ಕೇಳಿ ಬಂದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಇದರ ಸದಸ್ಯರಾಗಿದ್ದಾರೆ.

ಈ ತಂಡಕ್ಕೆ ಇದೀಗ 1 ಎಸ್ಪಿ, 2 ಡಿಎಸ್ಪಿ, 4 ಪೊಲೀಸ್ ಇನ್‌ಸ್ಪೆಕ್ಟರ್, 1 ಸಿಪಿಐ, 7 ಪಿಎಸ್‌ಐ, 1 ಎಎಸ್‌ಐ ಮತ್ತು 4 ಮುಖ್ಯ ಪೇದೆಗಳನ್ನು ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಆಯ್ಕೆಯಾದ ಈ ಅಧಿಕಾರಿಗಳು ಡಿಸಿಆರ್, ಕರಾವಳಿ ಭದ್ರತಾ ಪೊಲೀಸ್, ಮೆಸ್ಕಾಂ ಮತ್ತು ಎಫ್‌ಎಂಎಸ್ ವಿಭಾಗಗಳಿಂದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಅವರಿಂದ ಈ ತಂಡಕ್ಕೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ತನಿಖೆಯ ಪ್ರಗತಿಯನ್ನು ನಿಯಮಿತವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ವರದಿಯಾಗಿ ಸಲ್ಲಿಸಲಾಗುವುದು. ಈ ತಂಡವು ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಪ್ರಕರಣದ ವಿವರಗಳನ್ನು ಸಂಗ್ರಹಿಸಿ, ಸ್ಥಳ ಪರಿಶೀಲನೆ, ಸಾಕ್ಷಿಗಳ ವಿಚಾರಣೆ ಮತ್ತು ಅಸ್ಥಿಪಂಜರಗಳ ಡಿಎನ್‌ಎ ಪರೀಕ್ಷೆಯನ್ನು ನಡೆಸಲಿದೆ.

ಎಸ್‌ಐಟಿ ತಂಡವು ಈಗ ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶವಗಳ ದಫನ್ ಸ್ಥಳಗಳನ್ನು ಗುರುತಿಸಲು ಮತ್ತು ಅಸ್ಥಿಪಂಜರಗಳ ವೈದ್ಯಕೀಯ ಪರೀಕ್ಷೆಯನ್ನು ನಡೆಸಲು ಕಾರ್ಯಪ್ರವೃತ್ತವಾಗಿದೆ. ಪೊಲೀಸ್ ದಾಖಲೆಗಳ ಜೊತೆಗೆ, ಸಾಕ್ಷಿಗಳ ಹೇಳಿಕೆ ಮತ್ತು ಸ್ಥಳೀಯರ ಸಹಕಾರದೊಂದಿಗೆ ಈ ಪ್ರಕರಣವನ್ನು ಭೇದಿಸಲು ಕೆದಕಲು ತಂಡವು ಸಿದ್ಧತೆ ನಡೆಸಿದೆ. ಈ ತನಿಖೆಯ ಫಲಿತಾಂಶವು ಈ ಗಂಭೀರ ಆರೋಪಗಳ ಸತ್ಯಾಸತ್ಯತೆಯನ್ನು ಬೆಳಕಿಗೆ ತರಲಿದೆ ಎಂಬ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago