ಬೆಂಗಳೂರು : ಧರ್ಮಸ್ಥಳದ ಸುತ್ತಮುತ್ತಲಿನ ಭಾಗಗಳಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆಗಾಗಿ ರಚಿಸಲಾಗಿರುವ ಎಸ್‍ಐಟಿ ತಂಡ ಶನಿವಾರ ಅಲ್ಲಿನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಅಧಿಕಾರಿಗಳು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದು, ಇನ್ನಷ್ಟು ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ. ಎಸ್‍ಐಟಿ ಮುಖ್ಯಸ್ಥರಾದ ಪ್ರಣವ್ ಮೊಹಾಂತಿ ಮಾರ್ಗದರ್ಶನದಂತೆ ತಂಡದ ಅಧಿಕಾರಿಗಳು ಬೆಳ್ತಂಗಡಿಯಲ್ಲಿನ ಪೊಲೀಸ್ ಠಾಣೆ ಬಳಿಯ ಪೊಲೀಸ್ ಕ್ವಾಟ್ರಸ್ನಲ್ಲಿ ಎಸ್‍ಐಟಿ ಕಚೇರಿ ತೆರೆದಿದ್ದಾರೆ.
ಈ ಕಚೇರಿ ಆರಂಭಿಸಿರುವುದರಿಂದ ಇನ್ನಷ್ಟು ದೂರುಗಳು ದಾಖಲಾಗುವ ಸಾಧ್ಯತೆಗಳಿವೆ.ಎಸ್‍ಐಟಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಂಗಳೂರು ಎಸ್ಪಿ ಕಚೇರಿ ಆವರಣದಲ್ಲಿ ಎಸ್‍ಐಟಿ ಕಚೇರಿ ಸಿದ್ದವಾಗುತ್ತಿದೆ.





