ರಾಜ್ಯ

ಧರ್ಮಸ್ಥಳ ಪ್ರಕರಣ : ನಾಳೆ ಸ್ಥಳ ಪರಿಶೀಲಿಸಲಿರುವ ಎಸ್‌ಐಟಿ ತಂಡ

ಬೆಂಗಳೂರು : ಧರ್ಮಸ್ಥಳದ ಸುತ್ತಮುತ್ತಲಿನ ಭಾಗಗಳಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆಗಾಗಿ ರಚಿಸಲಾಗಿರುವ ಎಸ್‍ಐಟಿ ತಂಡ ಶನಿವಾರ ಅಲ್ಲಿನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಅಧಿಕಾರಿಗಳು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದು, ಇನ್ನಷ್ಟು ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ. ಎಸ್‍ಐಟಿ ಮುಖ್ಯಸ್ಥರಾದ ಪ್ರಣವ್ ಮೊಹಾಂತಿ ಮಾರ್ಗದರ್ಶನದಂತೆ ತಂಡದ ಅಧಿಕಾರಿಗಳು ಬೆಳ್ತಂಗಡಿಯಲ್ಲಿನ ಪೊಲೀಸ್ ಠಾಣೆ ಬಳಿಯ ಪೊಲೀಸ್ ಕ್ವಾಟ್ರಸ್ನಲ್ಲಿ ಎಸ್‍ಐಟಿ ಕಚೇರಿ ತೆರೆದಿದ್ದಾರೆ.

ಈ ಕಚೇರಿ ಆರಂಭಿಸಿರುವುದರಿಂದ ಇನ್ನಷ್ಟು ದೂರುಗಳು ದಾಖಲಾಗುವ ಸಾಧ್ಯತೆಗಳಿವೆ.ಎಸ್‍ಐಟಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಂಗಳೂರು ಎಸ್ಪಿ ಕಚೇರಿ ಆವರಣದಲ್ಲಿ ಎಸ್‍ಐಟಿ ಕಚೇರಿ ಸಿದ್ದವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಶತಮಾನದ ಶಾಲೆ; ಆರದ ಅಕ್ಷರ ದೀಪಮಾಲೆ

ಮಹಾದೇಶ್ ಎಂ ಗೌಡ ಹನೂರು: ಇದು ಶತೋತ್ತರ ದಶಮಾನೋತ್ಸವ ದಾಟಿ ಮುಂದೆ ಸಾಗಿರುವ ಶಾಲೆ. ಕಾಲ ಕಾಲಕ್ಕೆ ಅಭಿವೃದ್ಧಿಗೊಂಡು, ಪ್ರಸ್ತುತ…

10 seconds ago

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

10 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

10 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

11 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

11 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

11 hours ago