ರಾಜ್ಯ

ಧರ್ಮಸ್ಥಳ ಪ್ರಕರಣ : ಬಿಜೆಪಿ ಹೇಳಿದ್ದನ್ನೆ ಅನುಸರಿಸುತ್ತೇವೆ ; ಡಿಕೆಶಿ ಹೀಗಂದಿದ್ಯಾಕೆ ?

ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ನಡೆದಿರುವ ಅನುಮಾನಸ್ಪದ ನಾಪತ್ತೆ ಪ್ರಕರಣಗಳು, ಅಸಹಜ ಸಾವಿನ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ದಳ ರಚಿಸಲಾಗಿದೆ. ಗೃಹಸಚಿವರು ಇದನ್ನು ನಿರ್ವಹಣೆ ಮಾಡುತ್ತಾರೆ. ಒಳ್ಳೆಯ ಅಧಿಕಾರಿಗಳ ತಂಡವನ್ನೇ ನಿಯೋಜಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಯಾವ ರೀತಿ ನಡೆದುಕೊಳ್ಳಬೇಕು ಎಂಬುದನ್ನು ಬಿಜೆಪಿಯವರೇ ಹೇಳಲಿ. ನಾವು ಅದರಂತೆ ಅದನ್ನು ಅನುಸರಿಸುತ್ತೇವೆ. ಬಿಜೆಪಿಯವರು ಮತ್ತು ಮಾಧ್ಯಮಗಳ ಭಾಷೆಯೇ ನನಗರ್ಥವಾಗುತ್ತಿಲ್ಲ. 15 ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗಳ ಬಗ್ಗೆ ವ್ಯಕ್ತಿಯೊಬ್ಬ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದಾನೆ. ಮಾಧ್ಯಮಗಳು ಧರ್ಮಸ್ಥಳ ಭಾಗಕ್ಕೆ ಸಂಬಂಧಪಟ್ಟಂತಹ ವಿಚಾರಗಳನ್ನು ದೊಡ್ಡದಾಗಿ ಪ್ರಚಾರ ಮಾಡಿದೆ. ಸರ್ಕಾರ ಎಲ್ಲರ ಧ್ವನಿಗೂ ಕಿವಿಯಾಗಬೇಕು. ವಿರೋಧಪಕ್ಷಗಳ ಅಭಿಪ್ರಾಯಗಳನ್ನೂ ಗೌರವಿಸಬೇಕು. ಹಾಗಾಗಿ ತನಿಖಾ ತಂಡ ರಚಿಸಿದೆ. ಈ ವಿಚಾರವಾಗಿ ಆತುರ ಬೇಡ. ತನಿಖೆಯ ನಂತರ ಬರುವ ಅಂಶಗಳನ್ನು ಪರಿಗಣಿಸುವುದು ಸೂಕ್ತ ಎಂದು ಹೇಳಿದರು.

ಬಿಬಿಎಂಪಿ ವಿಭಜನೆ ಶತಸಿದ್ಧ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಭಜಿಸಲು ನಾವು ಬದ್ಧರಾಗಿದ್ದು, ಈ ವಿಚಾರವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅದಕ್ಕೂ ಮುನ್ನ ವಿರೋಧಪಕ್ಷಗಳ ನಾಯಕರ ಜೊತೆ ಅಧಿಕೃತವಾಗಿ ಮತ್ತು ಅನಧಿಕೃತವಾಗಿ ಚರ್ಚೆ ಮಾಡುತ್ತೇವೆ. ಜನಸಾಮಾನ್ಯರ ಅಭಿಪ್ರಾಯಗಳನ್ನೂ ಪರಿಗಣಿಸಿ ಬೆಂಗಳೂರಿನ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಮಾಡುತ್ತೇವೆ ಎಂದರು.

ಇ ಖಾತಾ, ಎ ಖಾತಾ, ಬಿ ಖಾತಾ ಆಂದೋಲನಗಳು ಮುಗಿದ ಬಳಿಕ ಸಂಬಂಧಪಟ್ಟಂತೆ ಚರ್ಚೆಯನ್ನು ಮುಂದುವರೆಸುತ್ತೇವೆ, ಸಭೆ ಕರೆಯುತ್ತೇವೆ ಎಂದ ಅವರು, 5 ಪಾಲಿಕೆಗಳನ್ನಾಗಿ ವಿಭಜಿಸುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಸ್ವಾಗತಾರ್ಹ. ಇದು ಯಾವುದೇ ತಪ್ಪುಗಳನ್ನು ಮಾಡದಂತೆ ನಮಗೆ ಎಚ್ಚರಿಕೆಯ ಗಂಟೆ. ನ್ಯಾಯಾಲಯದಲ್ಲಿ ಪ್ರಶ್ನಿಸುವ ಜನಸಮಾನ್ಯರ ಅಧಿಕಾರವನ್ನು ನಾವು ಮೊಟಕುಗೊಳಿಸುವುದಿಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟ ಉಳಿಸಿ: ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…

43 mins ago

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ: ಎಂಎಲ್‌ಸಿ ರಾಜೇಂದ್ರ ರಾಜಣ್ಣ

ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…

2 hours ago

ಧರ್ಮಸ್ಥಳ ಬುರುಡೆ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರ ಎಫ್‌ಎಸ್‌ಎಲ್‌ಗೆ ರವಾನೆ

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…

2 hours ago

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…

2 hours ago

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

3 hours ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago