Mysore
27
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಧರ್ಮಸ್ಥಳ ಪ್ರಕರಣ : ಮಹಿಳಾ ಸಂಘಟನೆಗಳಿಂದ ಸೋನಿಯಾಗೆ ಪತ್ರ

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ ಹೋರಾಟಗಾರ್ತಿಯರು ಪತ್ರ ಬರೆದಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ʻಕೊಂದವರು ಯಾರು? Who Killed the Women in Dharmasthala?ʼ ಶೀರ್ಷಿಕೆಯಲ್ಲಿ ಪತ್ರ ಬರೆಯಲಾಗಿದ್ದು, ಎಸ್‌ಐಟಿ ತನಿಖೆಯ ಬೆಳವಣಿಗೆ ಬಗ್ಗೆ ತೀವ್ರ ಆತಂಕ ಹೊರಹಾಕಿವೆ ಮಹಿಳಾ ಸಂಘಟನೆಗಳು. ಅಲ್ಲದೇ ಚಿನ್ನಯ್ಯನ ಬಂಧನ, ಸುಜಾತ ಭಟ್ ಪ್ರಕರಣ, ತನಿಖೆ ಕುರಿತ ಮಾಧ್ಯಮ ವರದಿಗಳು ಹಾಗೂ ಡಿಸಿಎಂ ಡಿಕೆಶಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ಈ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ, ಪ್ರಕರಣದಲ್ಲಿ ಉರುಳಿಲ್ಲ ಎನ್ನುವಂತೆ ದಾರಿ ತಪ್ಪಿಸುವಂತಹ ಹೇಳಿಕೆಯನ್ನ ಡಿಸಿಎಂ ನೀಡಿದ್ದಾರೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಪಕ್ಷಗಳ ಒತ್ತಡಕ್ಕೆ ಮಣಿದಿದ್ದಾರೆ ಎಂದಿರುವ ಹೋರಾಟಗಾರರು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಮೂರು ಬೇಡಿಕೆಗಳನ್ನಿಟ್ಟಿದ್ದಾರೆ.

SIT ಯವರು 2018ರ ವಿ.ಎಸ್ ಉಗ್ರಪ್ಪ ಸಮಿತಿ ನೀಡಿದ ವರದಿ ಪರಿಗಣಿಸಬೇಕು. SIT ನ್ಯಾಯ ಸಮ್ಮತ ತನಿಖೆ ನಡೆಸಲು ಸರ್ಕಾರದ ಜನಪ್ರತಿನಿಧಿಗಳು ಸಹಕರಿಸಬೇಕು. ಸೌಜನ್ಯ ಪ್ರಕರಣದ ತನಿಖೆಯಲ್ಲಿ ಲೋಪ ಎಸಗಿದ ಅಧಿಕಾರಿಗಳನ್ನ ನ್ಯಾಯಲಯದ ಆದೇಶದಂತೆ ತನಿಖೆಗೆ ಒಳಪಡಿಸಬೇಕು ಎಂಬ ಮೂರು ಬೇಡಿಕೆಗಳನ್ನು ಮುಂದಿಟ್ಟಿವೆ.

Tags:
error: Content is protected !!