ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ ಹೋರಾಟಗಾರ್ತಿಯರು ಪತ್ರ ಬರೆದಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.
ʻಕೊಂದವರು ಯಾರು? Who Killed the Women in Dharmasthala?ʼ ಶೀರ್ಷಿಕೆಯಲ್ಲಿ ಪತ್ರ ಬರೆಯಲಾಗಿದ್ದು, ಎಸ್‌ಐಟಿ ತನಿಖೆಯ ಬೆಳವಣಿಗೆ ಬಗ್ಗೆ ತೀವ್ರ ಆತಂಕ ಹೊರಹಾಕಿವೆ ಮಹಿಳಾ ಸಂಘಟನೆಗಳು. ಅಲ್ಲದೇ ಚಿನ್ನಯ್ಯನ ಬಂಧನ, ಸುಜಾತ ಭಟ್ ಪ್ರಕರಣ, ತನಿಖೆ ಕುರಿತ ಮಾಧ್ಯಮ ವರದಿಗಳು ಹಾಗೂ ಡಿಸಿಎಂ ಡಿಕೆಶಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.
ಈ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ, ಪ್ರಕರಣದಲ್ಲಿ ಉರುಳಿಲ್ಲ ಎನ್ನುವಂತೆ ದಾರಿ ತಪ್ಪಿಸುವಂತಹ ಹೇಳಿಕೆಯನ್ನ ಡಿಸಿಎಂ ನೀಡಿದ್ದಾರೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಪಕ್ಷಗಳ ಒತ್ತಡಕ್ಕೆ ಮಣಿದಿದ್ದಾರೆ ಎಂದಿರುವ ಹೋರಾಟಗಾರರು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಮೂರು ಬೇಡಿಕೆಗಳನ್ನಿಟ್ಟಿದ್ದಾರೆ.
SIT ಯವರು 2018ರ ವಿ.ಎಸ್ ಉಗ್ರಪ್ಪ ಸಮಿತಿ ನೀಡಿದ ವರದಿ ಪರಿಗಣಿಸಬೇಕು. SIT ನ್ಯಾಯ ಸಮ್ಮತ ತನಿಖೆ ನಡೆಸಲು ಸರ್ಕಾರದ ಜನಪ್ರತಿನಿಧಿಗಳು ಸಹಕರಿಸಬೇಕು. ಸೌಜನ್ಯ ಪ್ರಕರಣದ ತನಿಖೆಯಲ್ಲಿ ಲೋಪ ಎಸಗಿದ ಅಧಿಕಾರಿಗಳನ್ನ ನ್ಯಾಯಲಯದ ಆದೇಶದಂತೆ ತನಿಖೆಗೆ ಒಳಪಡಿಸಬೇಕು ಎಂಬ ಮೂರು ಬೇಡಿಕೆಗಳನ್ನು ಮುಂದಿಟ್ಟಿವೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…