youtuber sameer
ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿದ್ದೇನೆ ಅಂತ ಹೇಳಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿದೆ. ಇದರ ನಡುವೆ ಯುಟ್ಯೂಬರ್ ಸಮೀರ್ ವಿರುದ್ಧವೂ ಬೆಳ್ತಂಗಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.
ದೊಂಬಿ ಮಾಡುವ ಉದ್ದೇಶದಿಂದ ವಿಡಿಯೋ ಮಾಡಿದ ಆರೋಪದಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು, ಶುಕ್ರವಾರ ಸಮೀರ್ ಬಂಧನಕ್ಕೆ ಮುಂದಾಗಿದ್ದರು. ಆದರೆ, ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್ ಅಜ್ಞಾತವಾಗಿದ್ದರು.
ಹೀಗಾಗಿ, ಪೊಲೀಸರು ಶನಿವಾರ ಆತನ ಬೆಂಗಳೂರು ಹಾಗೂ ಬಳ್ಳಾರಿ ನಿವಾಸಕ್ಕೆ ತೆರಳಿ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿ ಬಂದಿದ್ದರು. ಹೀಗಾಗಿ, ಭಾನುವಾರ ಸಮೀರ್ ಪೊಲೀಸರ ವಿಚಾರಣೆಗೆ ಹಾಜರಾಗಿದ್ದನು. ಮೂವರು ವಕೀಲರ ಸಮೇತ, ದಾಖಲೆ ಹಿಡಿದು ವಿಚಾರಣೆಗೆ ಬಂದಿದ್ದನು.
ಸಮೀರ್‌ಗೆ 45 ಪ್ರಶ್ನೆ
ತನಿಖಾಧಿಕಾರಿ ನಾಗೇಶ್ ಕದ್ರಿ ಅವರು ಸಮೀರ್ ಎಂಡಿಯನ್ನ ವಿಚಾರಣೆಗೆ ಒಳಪಡಿಸಿದರು. ಧರ್ಮಸ್ಥಳ ಬಗ್ಗೆ ಮಾಡಿದ್ದ ವಿಡಿಯೋ ಮೇಕಿಂಗ್ಗೆ ಸಹಕಾರ ಕೊಟ್ಟಿದ್ಯಾರು? ಆರೋಪಕ್ಕೆ ಸಾಕ್ಷಿ ಇದೆಯಾ ಸೇರಿದಂತೆ ಚಿನ್ನಯ್ಯನ ಲಿಂಕ್ ಬಗ್ಗೆಯೂ ಸೇರಿದಂತೆ ಸುಮಾರು 45 ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದಾರೆ.
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…