R Ashok
ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು ಸರದಿ. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಹಾಗೂ ಲಾಠಿ ಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ. ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ. ನಾವು ಪಾಕಿಸ್ತಾನದಲ್ಲಿದ್ದಿವೋ, ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ ಎಂದು ಕಿಡಿಕಾರಿದರು.
ಇನ್ನು ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಗಣಪತಿ ವಿಸರ್ಜನೆ ಮಾಡುವುದು ಸಾರ್ವಜನಿಕ ರಸ್ತೆ. ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್ ಕೊಟ್ಟಿರುವುದು. ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಈ ತರಹ ಗೂಂಡಾಗಳು ಮಸೀದಿಯಲ್ಲಿ ಇರುತ್ತಾರೆ ಎಂದು ನಿಮಗೆ ಜ್ಞಾನ ಬೇಡವೇ. ಮದ್ದೂರು ಘಟನೆಗೆ ಸಿಎಂ ಹಾಗೂ ಡಿಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…