ರಾಜ್ಯ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದೆ. ಹಲವಾರು ಜನರು ಪ್ರಕರಣ ತನಿಖೆಗೆ ಒತ್ತಾಯಿಸಿದರು. ಹಲವು ಜನ ಕಂಪ್ಲೆಂಟ್‌ ಕೊಟ್ಟಿದ್ದಾರೆ. ತನಿಖೆ ಮಾಡಿದರೆ ನಿಜಾಂಶ ಹೊರ ಬರಲಿದೆ ಎಂದು ಹೇಳಿದರು.

ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಪ್ರಣವ್‌ ಮೊಹಂತಿಗೆ ವಹಿಸಿದ್ದೇವೆ. ಹಿರಿಯ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ. ಜವಾಬ್ದಾರಿಯಿಂದ ತನಿಖೆ ಮಾಡುತ್ತೇವೆ ಎಂದು ಪ್ರಣವ್‌ ತಿಳಿಸಿದ್ದಾರೆ. ಪ್ರಕರಣ ತನಿಖೆಯಿಂದ ಯಾರೂ ಹಿಂದೆ ಸರಿಯುವ ಬಗ್ಗೆ ಹೇಳಿಲ್ಲ. ಈ ಬಗ್ಗೆ ನನಗೆ ಹಾಗೂ ಸರ್ಕಾರಕ್ಕೆ ತಿಳಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಯುಗಾದಿ ವಿಶೇಷ | ಧಾರವಾಡದ ಮಣ್ಣಿನಲ್ಲಿ ಹಸಿರು ಚಿಗುರಿದ ಕಂಪನ

ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…

48 mins ago

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

1 hour ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

14 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

16 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

17 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

18 hours ago